ದೆಹಲಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಮಂಡಿಸಿದ ವಿಚಾರಗಳ ಹೈಲೈಟ್ಸ್:

*ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರಿಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು.

*ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ.

*₹18,172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ.

*ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ.

*ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ.

*ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.

*ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು.

*ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಿಎಂ ಮನವಿ ಮಾಡಿದರು.

*ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ.

*15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಭಲವಾಗಿ ಮಂಡಿಸಬೇಕಾಗಿದೆ

*ಕಳಸಾ ಬಂಡೂರಿ ಯೋಜನೆಗೆ ಪಾರಿಸಾರಿಕ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ.

*1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ , ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು.

*ಇನ್ಪುಟ್ ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ. ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ಧ್ವನಿ ಎತ್ತಬೇಕಾಗಿ ಮನವಿ ಎಂದು ಸಿಎಂ ತಮ್ಮ ಪ್ರಾಸ್ತಾವಿಕವಾಗಿ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.