ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಬೇಡಿ: ಸಿಎಂ ಸೂಚನೆ

Published 23 ಮೇ 2024, 8:32 IST
Last Updated 23 ಮೇ 2024, 8:32 IST
ಅಕ್ಷರ ಗಾತ್ರ

ಬೆಂಗಳೂರು: ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳಬಾರದು ಎಂದು ಬ್ಯಾಂಕರ್‌ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಬರ ಮತ್ತು ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು. 

ಈ ವರ್ಷದ ಸಾಲದ ಯೋಜನೆಯನ್ನು ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರ್‌ಗಳ ಜತೆ ಸಮನ್ವಯವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜೂನ್ 6 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನಕೊಡಬೇಕು. ಎಲ್ಲಾ ಜಿಲ್ಲಾ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ಒಳಗೆ  ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು. ಟೆಂಡರ್‌ ಕರೆಯಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ.ಆದ್ದರಿಂದ ಟೆಂಡರ್‌ ಕರೆದು, ಅಂತಿಮಗೊಳಿಸಿ ಕಾರ್ಯದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ, ರಾಜ್ಯದ ಅಭಿವೃದ್ಧಿಯೂ ವಿಳಂಬವಾಗುತ್ತದೆ ಎಂದು ಹೇಳಿದರು.

500 ಕ್ಕೂ ಹೆಚ್ಚು ಘೋಷಣೆಗಳನ್ನು ಹೊರಡಿಸಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಅಭಿವೃದ್ಧಿಗೆ ವೇಗ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲೆಯ ತಗಡೂರು ಮತ್ತು ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ತಲೆದೋರಿದೆ. ಕಲುಷಿತ ನೀರು ಕುಡಿದ ಪರಿಣಾಮ ಕಾಲರಾ ಬಂದಿದೆ.  ಕುಡಿಯುವ ಯೋಗ್ಯ ನೀರು ಪೂರೈಕೆ ಮಾಡುವಲ್ಲಿ ಎಂಜಿನಿಯರುಗಳು ವಿಫಲರಾಗಿದ್ದಾರೆ. ನೀರಿನ ಮೂಲ ಯೋಗ್ಯವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸದೇ ಇರುವುದ ಅಪರಾಧ. ಸಾಲುಹುಂಡಿಯಲ್ಲಿ 40 ಜನ ಅಸ್ವಸ್ಥರಾಗಿದ್ದು ಒಬ್ಬ ಮೃತಪಟ್ಟಿದ್ದಾನೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT