ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರಿಗೆ ರಕ್ಷಣೆ ಹೇಳಿಕೆಯಲ್ಲಿ ತಪ್ಪೇನಿದೆ: ಸಿದ್ದರಾಮಯ್ಯ

Published 5 ಡಿಸೆಂಬರ್ 2023, 15:33 IST
Last Updated 5 ಡಿಸೆಂಬರ್ 2023, 15:33 IST
ಅಕ್ಷರ ಗಾತ್ರ

ಬೆಳಗಾವಿ: ‘ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಂಗಳವಾರ ಇಲ್ಲಿನ ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಸ್ಲಿಂ ಸಮುದಾಯಕ್ಕೆ ಬಜೆಟ್‌ನಲ್ಲಿ ಅನುದಾನ ನೀಡುವುದಾಗಿ ಹೇಳಿದ್ದೇನೆ. ವರದಿ ಹೊರತು ಬೇರೇನೂ ಮಾತನಾಡಿಲ್ಲ. ಎರಡು ಪತ್ರಿಕೆಗಳಲ್ಲಿ ಮಾತ್ರ ಸರಿಯಾದ ವರದಿ ಬಂದಿದೆ’ ಎಂದರು.

ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ  ಮಾತನಾಡಿದ್ದ ಸಿದ್ದರಾಮಯ್ಯ, ‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಅನುದಾನವನ್ನು ಹಿಂದಿನ ಸರ್ಕಾರ ಕಡಿತ ಮಾಡಿತ್ತು. ಮುಂದಿನ ದಿನಗಳಲ್ಲಿ ಅನುದಾನ ಹೆಚ್ಚಿಸುತ್ತೇನೆ. ₹10 ಸಾವಿರ ಕೋಟಿವರೆಗೆ ಅನುದಾನ ನೀಡಲು ಸಿದ್ಧ’ ಎಂದಿದ್ದರು.

ಈ ಬಗ್ಗೆ ಮಂಗಳವಾರ ಬೆಳಿಗ್ಗೆಯೇ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ‘ಸಿದ್ದರಾಮಯ್ಯ ಮುಸ್ಲಿಮರ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ’ ಎಂದು ಹರಿಹಾಯ್ದಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT