ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಮಹಾರಾಷ್ಟ್ರದಿಂದ ಸಿಗದ ಸ್ಪಂದನ

Published 21 ಮಾರ್ಚ್ 2024, 23:48 IST
Last Updated 21 ಮಾರ್ಚ್ 2024, 23:48 IST
ಅಕ್ಷರ ಗಾತ್ರ

ಕಲಬುರಗಿ: ಭೀಕರ ಬರಗಾಲದಿಂದಾಗಿ ಉತ್ತರ ಕರ್ನಾಟಕದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರು ಪರದಾಡುವಂತಾಗಿದೆ. ಹೀಗಾಗಿ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಅಡಿ, ಭೀಮಾ ನದಿಗೆ ಉಜನಿ ಜಲಾಶಯದಿಂದ 1 ಟಿಎಂಸಿ ಅಡಿ ನೀರನ್ನು ಹರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಪತ್ರ ಬರೆದಿದ್ದು, ಹದಿನೈದು ದಿನಗಳಾದರೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ.

ಭೀಮಾ ನದಿಗೆ ಉಜನಿಯಿಂದ ನೀರು ಹರಿಸಲು ಮಹಾರಾಷ್ಟ್ರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟೀಕಾರ ಅವರು ಜಿಲ್ಲೆಯ ಅಫಜಲಪುರದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಬಳಗಾನೂರ ಕಾಲುವೆ ಮೂಲಕ ಭೀಮಾ ನದಿಗೆ ನೀರು ಹರಿಸುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಭೀಮಾ ನದಿಗೆ ಉಜನಿ ಜಲಾಶಯದಿಂದ ನೀರು ಹರಿಸುವಂತೆ ಕೋರಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರೂ ಸೊಲ್ಲಾಪುರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT