ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯಲ್ಲಿ ಸಿಎಂ ಕಾಟಾಚಾರದ ಸಭೆ: ಅಶೋಕ ಟೀಕೆ

Published 27 ಜೂನ್ 2024, 16:43 IST
Last Updated 27 ಜೂನ್ 2024, 16:43 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಸಲಿರುವುದು ಕಾಟಾಚಾರದ ಸಭೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಯಾವಾಗಲೂ ಸೌಹಾರ್ದತೆ ಇರಬೇಕು. ಅಧಿಕಾರ ಇಂದು ಬರುತ್ತದೆ. ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ– ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ. ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಜನರು ಬೆಲೆ ಏರಿಕೆಗಳಿಗೆ ತಯಾರಿರಬೇಕು ಎಂದರು.

‘ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.

ಕೆಂಪೇಗೌಡರು ಒಬ್ಬರ ಸ್ವತ್ತಲ್ಲ: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ, ಕಾಂಗ್ರೆಸ್‌ ನಾಯಕರು ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕರು. ಕೆಂಪೇಗೌಡ ಜಯಂತಿಗೆ ಅವರನ್ನು ಗೌರವದಿಂದ ಆಹ್ವಾನಿಸಬೇಕಿತ್ತು. ಈ ಜಯಂತಿ ರಾಜಕೀಯಕ್ಕೆ ವೇದಿಕೆಯಾಗಬಾರದು. ಇದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣವಾಗಿದೆ. ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನೂ ಆಹ್ವಾನಿಸಬೇಕು ಎಂದು ತಿಳಿಸಿದರು.

ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನು ಆಹ್ವಾನಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT