ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಹಗರಣದ ದಾಖಲೆಯನ್ನು ಯತ್ನಾಳ್ ಆಯೋಗದ ಮುಂದಿಡಲಿ: ಸಿಎಂ ಸಿದ್ದರಾಮಯ್ಯ

Published 28 ಡಿಸೆಂಬರ್ 2023, 9:24 IST
Last Updated 28 ಡಿಸೆಂಬರ್ 2023, 9:24 IST
ಅಕ್ಷರ ಗಾತ್ರ

ಬೆಂಗಳೂರು: ‘ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್‌ ಹಗರಣದ ದಾಖಲೆಗಳನ್ನು ವಿಚಾರಣಾ ಆಯೋಗದ ಮುಂದಿಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ನಾಮಫಲಕದಲ್ಲಿ ಕನ್ನಡ ಇರಲೇಬೇಕು: ಕನ್ನಡ ನಾಮಫಲಕ ಹಾಕಬೇಕೆಂದು ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧ ಇಲ್ಲ. ಆದರೆ, ಸಂಘಟನೆಗಳು ಶಾಂತಿಯುತ ಪ್ರತಿಭಟನೆ ಮಾಡಬೇಕು’ ಎಂದರು.

‘ಕಾನೂನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ಭಾಷೆಗಳ ಬಗ್ಗೆ ವಿರೋಧ ಇಲ್ಲ. ಆದರೆ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡ ಇರಲೇಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT