ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ವೇಳೆ ಸತೀಶ್ ರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚಿಸಿದ್ದೇನೆ. ಘಟನೆ ವೇಳೆ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಲು ಸೂಚಿಸಲಾಗಿದೆ’ ಎಂದರು.

ಕ್ಷುಲ್ಲಕ ಕಾರಣಕ್ಕೆ ಗಲಾಟೆ:

ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ. ಘಟನೆ ಕುರಿತು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಜತೆ ಮಾತನಾಡಿ ಮಾಹಿತಿ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.