ಬೆಂಗಳೂರು: ‘ಹತ್ತು ವರ್ಷಗಳ ಬಿಜೆಪಿ ಆಡಳಿತವನ್ನು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿ ಇದು ಭಾರತದ 'ವಿನಾಶ ಕಾಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಬಿಜೆಪಿ ಅವಧಿಯಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ಶೋಷಿತರು ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಕಷ್ಟ–ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.

‘ಹತ್ತು ವರ್ಷಗಳ ಹಿಂದೆ ಮತದಾರರಿಗೆ ನೀಡಿದ್ದ ಒಂದೇ ಒಂದು ಭರವಸೆಯನ್ನು ಮೋದಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಈಡೇರಿಸಿಲ್ಲ. ರೈತರ ಆದಾಯದ ದುಪ್ಪಟ್ಟು, ಯುವಜನರಿಗೆ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ , ಮಹಿಳೆಯರಿಗೆ ರಕ್ಷಣೆ, ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಶೋಷಿತ ಸಮುದಾಯಗಳಿಗೆ ರಕ್ಷಣೆ, ಅಗ್ಗದ ದರದಲ್ಲಿ ಅಗತ್ಯವಸ್ತುಗಳ ಪೂರೈಕೆ ಮೊದಲಾದ ಬಣ್ಣಬಣ್ಣದ ಭರವಸೆಗಳನ್ನು ನೀಡಿದ್ದ ಅವರು, ಗೆದ್ದ ನಂತರ ಅವುಗಳನ್ನು ಮರೆತು ದೇವರು- ಧರ್ಮದ ಹೆಸರಿನ ಭಾವನಾತ್ಮಕ ರಾಜಕಾರಣ, ಉದ್ಯಮಿಗಳ ತುಷ್ಟೀಕರಣದಲ್ಲಿ ಮುಳುಗಿದ್ದಾರೆ’ ಎಂದು ಕುಟುಕಿದ್ದಾರೆ.

‘ಹತ್ತು ವರ್ಷಗಳ ನರೇಂದ್ರ ಮೋದಿಯವರ ಅನ್ಯಾಯ ಕಾಲದ ವಿವರಗಳನ್ನು ಅಂಕಿ–ಅಂಶಗಳ ಸಹಿತ ಕರ್ನಾಟಕದ ಜನತೆಯ ಮುಂದೆ ಇಡುತ್ತಿದ್ದೇನೆ. ದೇಶ ಇಂದು ಅಮೃತ ಕಾಲದಲ್ಲಿ ಇದೆಯೊ? ಅನ್ಯಾಯದ ಕಾಲದಲ್ಲಿ ಇದೆಯೊ? ಎಂದು ಜನರೇ ತೀರ್ಮಾನಿಸಲಿ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.