ಬೆಂಗಳೂರು: ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಎರಡು ದಿನಗಳಿಂದ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡಿದ್ದು, ಅದನ್ನು ಲೆಕ್ಕಿಸದೆ ಶುಕ್ರವಾರ ಅವರು 2 ಗಂಟೆ 50 ನಿಮಿಷಗಳ ಕಾಲ ಬಜೆಟ್ ಪುಸ್ತಕ ಓದಿದ್ದರು. ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಜೆಟ್ಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ, ತಮ್ಮ ನಿವಾಸಕ್ಕೆ ತೆರಳಿದ್ದರು.
‘ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ಶನಿವಾರ ನಡೆಸಿದ್ದ ವೈದ್ಯರು, ಚಳಿ ಇರುವುದರಿಂದ ಹೊರಗೆ ಹೋಗದೆ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು. ಆದರೂ ತಮ್ಮ ನಿವಾಸದಲ್ಲಿ ಮಧ್ಯಾಹ್ನದವರೆಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದ ಅವರು, ಮಧ್ಯಾಹ್ನದ ಬಳಿಕ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದಲ್ಲಿ ಮತ್ತು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.