ಬೆಂಗಳೂರು: 'ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ' ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.