ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ

Published 26 ಜೂನ್ 2024, 15:30 IST
Last Updated 26 ಜೂನ್ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಗೆ ತೆರಳಲಿದ್ದು, ಅಲ್ಲಿ ರಾಜ್ಯದ ಸಂಸದರ ಜತೆ ಸಭೆ ನಡೆಸಲಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಮತ್ತು ಬೇಡಿಕೆಗಳ ಬಗ್ಗೆ ಸಂಸ್ತತಿನಲ್ಲಿ ಒಗ್ಗಟ್ಟಿನಿಂದ ಪ್ರಸ್ತಾಪಿಸುವುದರ ಮೂಲಕ ರಾಜ್ಯದ ಹಿತ ಕಾಪಾಡುವ ಬಗ್ಗೆ ಸಂಸದರ ಸಭೆಯಲ್ಲಿ ಚರ್ಚಿಸಲಾಗುವುದು. ಅಲ್ಲದೇ, ಪಕ್ಷದ ಹೈಕಮಾಂಡ್‌ ಜೊತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ವಿವಿಧ ಸಚಿವರನ್ನು ಮುಖ್ಯಮಂತ್ರಿಯವರು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT