ಬೆಂಗಳೂರು: ಬುಧವಾರ (ಮಾ.18) ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿ, ‘ಧೈರ್ಯವಾಗಿ ಪರೀಕ್ಷೆ ಎದುರಿಸಿ ಬನ್ನಿ’ ಎಂದು ಹೇಳಿದರು.

‘ಪರೀಕ್ಷೆ ಎಂದರೆ ಹೆದರಬೇಕಾಗಿಲ್ಲ. ಒಂದು ವೇಳೆ ಕಡಿಮೆ ಅಂಕ ಬಂದರೆ, ಅಂಕವನ್ನು ಸುಧಾರಿಸಿಕೊಳ್ಳಲು ಇನ್ನೂ ಎರಡು ಅವಕಾಶಗಳಿವೆ’ ಎಂದು ಅವರು ವಿಧಾನಸಭೆಯಲ್ಲಿ ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು, ‘ಮಕ್ಕಳ ಮೇಲೆ ಪೋಷಕರು ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಅದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಯಾರಾದರೂ ಪ್ರಶ್ನೆ ಪತ್ರಿಕೆಗಳನ್ನು ಹಾಕಿದರೆ, ಅಂತಹವರನ್ನು ಮುಲಾಜಿಲ್ಲದೇ ಜೈಲಿಗೆ ಹಾಕಿ’ ಎಂದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರೂ ಶುಭ ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.