ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಶ್ವರಪ್ಪ ಮನೆಯಲ್ಲಿ ನಡೆದಿದ್ದು ‘ಪ್ರೇಮ ಸಲ್ಲಾಪ’ವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ

Published : 26 ಸೆಪ್ಟೆಂಬರ್ 2024, 16:11 IST
Last Updated : 26 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಬೆಂಗಳೂರು: ‘ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕುಳಿತು ಆ ಪಕ್ಷದ ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಅದನ್ನು ಅಂತರ್‌ಕಲಹ ಎಂದು ಕರೆಯದೆ, ‘ಪ್ರೇಮ ಸಲ್ಲಾಪ’ ಎನ್ನೋಣವೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹರಿಯಾಣ ಚುನಾವಣಾ ಪ್ರಚಾರದ ವೇಳೆ ತಮ್ಮ ಸರ್ಕಾರವನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಕರ್ನಾಟಕದ ಕಾಂಗ್ರೆಸ್‌ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ‌ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗೆ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

‘ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಮೋದಿ ಭಾಷಣ ಮಾಡುವ ವೇಳೆಯಲ್ಲಿಯೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿದ್ದುದು ವಿಪರ್ಯಾಸ. ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೊ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ’ ಎಂದಿದ್ದಾರೆ.

‘ಮೋದಿಯವರೇ, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿ ಮುಗಿಸಿದ್ದೇವೆ. ನಮ್ಮ ಒಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT