ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಲಬುರಗಿಗೆ ಆಗಮಿಸಿದ್ದು, ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ. ನೋಟ್ ಬ್ಯಾನ್ ಮಾಡಿ ಕಪ್ಪು ಹಣದ ಮೂಲೋತ್ಪಾಟನೆ ಮಾಡುತ್ತೇವೆ. ನಾ ಖಾವೂಂಗಾ– ನಾ ಖಾನೆ ದೂಂಗಾ ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ 10 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.