ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರನ್ನ ಸಕ್ಕರೆ ಕಾರ್ಖಾನೆ: ಟೆಂಡರ್ ಕರೆಯಲು ಸಿಎಂ ಸೂಚನೆ

Published 28 ಸೆಪ್ಟೆಂಬರ್ 2023, 16:28 IST
Last Updated 28 ಸೆಪ್ಟೆಂಬರ್ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಕಾರ್ಖಾನೆಯಲ್ಲಿ 2023- 24ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಕಬ್ಬು ಅರೆಯುವ ಕಾರ್ಯ ಆರಂಭಿಸಬೇಕು. ಕಾರ್ಖಾನೆಯ ಪುನಶ್ಚೇತನದಿಂದ ರೈತರಿಗೂ ಅನುಕೂಲ ಆಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧ ಇರುವ ಸಂಸ್ಥೆಗಳು ಟೆಂಡರ್‌ನಲ್ಲಿ ಪಾಲ್ಗೊಳ್ಳುವಂತೆ ಆಗಬೇಕು’ ಎಂದು ಸಲಹೆ ನೀಡಿದರು.

ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT