ಕಾಂಗ್ರೆಸ್‌ನದ್ದು ನೀಚ ಮನಃಸ್ಥಿತಿ: ಆರ್. ಅಶೋಕ ಟೀಕೆ
‘ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ ಮಹಾ ಮೋಸವನ್ನು, ಮಹಾ ಅಪಮಾನಗಳನ್ನು ಎಳೆ ಎಳೆಯಾಗಿ ದೇಶದ ಜನರ ಮುಂದೆ ಬಿಚ್ಚಿಟ್ಟ ಅಮಿತ್ ಶಾ ಅವರ ಭಾಷಣದಿಂದ ನಿಮಗೆ ಮುಜುಗರ, ಹತಾಶೆ ಆಗಿರುವುದು ಆಶ್ಚರ್ಯವೇನಲ್ಲ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ್ದಾರೆ. ‘ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಭೂಮಿ ನೀಡಲು ನಿರಾಕರಿಸಿದ, ಅವರನ್ನು ಬಿಟ್ಟು, ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡ ನೀಚ ಮನಃಸ್ಥಿತಿ ನಿಮ್ಮ ಕಾಂಗ್ರೆಸ್ ಪಕ್ಷದ್ದು. ಇದೀಗ ಕೇಂದ್ರ ಗೃಹ ಸಚಿವ
ಅಮಿತ್ ಶಾ ಅವರ ಭಾಷಣವನ್ನು ತಿರುಚಿ ಮತ್ತೊಮ್ಮೆ ಬಾಬಾ ಸಾಹೇಬರನ್ನು ಅವಮಾನಿಸುತ್ತಿದ್ದೀರಿ’ ಎಂದು ದೂರಿದ್ದಾರೆ.