ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಒಂಬತ್ತು ಸ್ಥಾನ ಗೆಲ್ಲಲು ಸಿ.ಎಂ. ಕಾರಣ: ಶಾಸಕ ರಾಯರಡ್ಡಿ

Published 4 ಜೂನ್ 2024, 16:34 IST
Last Updated 4 ಜೂನ್ 2024, 16:34 IST
ಅಕ್ಷರ ಗಾತ್ರ

ಯಲಬುರ್ಗಾ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿರುವುದನ್ನು ಮೆಚ್ಚಿಕೊಂಡು ಮತದಾರರು ಬೆಂಬಲಿಸಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಂಬತ್ತು ಸ್ಥಾನಗಳಲ್ಲಿ ಗೆಲುವು ಸಾಧ್ಯವಾಗಿದೆ’ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಮ್ಮ ನಿರೀಕ್ಷೆಯಂತೆ ಫಲಿತಾಂಶ ಪ್ರಕಟಗೊಂಡಿದೆ. ಇನ್ನೆರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕಿತ್ತು. ಆದರೆ ಸಾಧ್ಯವಾಗಿಲ್ಲ. ಮುಖ್ಯವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ತರ ಸಾಧನೆಯಾಗಿದೆ. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಯೇ ಮುಖ್ಯ ಕಾರಣ’ ಎಂದರು.

‘ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ ಗೆಲುವು ನಿರೀಕ್ಷಿತವಾಗಿತ್ತು. ಯಲಬುರ್ಗಾ ಕ್ಷೇತ್ರದಲ್ಲಿಯೇ 3 ಸಾವಿರಕ್ಕೂ ಅಧಿಕ ಮತಗಳ ಲೀಡ್ ಕೊಡಲಾಗಿದೆ. ಕ್ಷೇತ್ರದಲ್ಲಿ ಅವರ ವರ್ಚಸ್ಸು, ಪಕ್ಷದ ಸಾಧನೆ, ಮುಖಂಡರ ಉತ್ತಮ ಪ್ರಚಾರ ಕಾರ್ಯ ಹಾಗೂ ವಿವಿಧ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಮಾಡಿರುವ ಉತ್ತಮ ಅಭಿವೃದ್ಧಿ ಕೆಲಸಗಳು ವರವಾಗಿವೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ವೀರನಗೌಡ ಪೊಲೀಸ್‍ಪಾಟೀಲ, ಡಾ.ಶಿವನಗೌಡ ದಾನರಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಮಹಾಂತೇಶ ಗಾಣಗೇರ್, ರೇವಣೆಪ್ಪ ಹಿರೇಕುರುಬರ, ಶರಣಪ್ಪ ಗಾಂಜಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT