ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

5 ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆ ಜಾರಿಗೆ ಸಿಎಂ ಒತ್ತಾಯ

Published 28 ಜೂನ್ 2024, 20:17 IST
Last Updated 28 ಜೂನ್ 2024, 20:17 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಭಾರತ ಸರ್ಕಾರವು ₹80 ಕೋಟಿ ವೆಚ್ಚದಲ್ಲಿ ಇಂಡಿಯನ್‌ ರಿಸರ್ವ್‌ ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ ₹200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹300 ಕೋಟಿ ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT