ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಫೆ. 17 ರಂದು ಮಂಡಿಸಲು ತಯಾರಿ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಜ್ಞಾತ ಸ್ಥಳದಲ್ಲಿ ಸೋಮವಾರ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಅಚ್ಚರಿ ಮೂಡಿಸಿದರು.

ಸಾಮಾನ್ಯವಾಗಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆಗಳು ನಡೆಯುತ್ತವೆ. ಅದರಂತೆ, ಸೋಮವಾರ ಕೂಡ ಬಜೆಟ್ ಪೂರ್ವಭಾವಿ ಸಭೆಗೆ ಸಮಯ ಕಾಯ್ದಿರಿಸಲಾಗಿತ್ತು. ಶಕ್ತಿಭವನದಲ್ಲಿ
ಈ ಸಭೆ ನಡೆಯಬೇಕಿತ್ತು. ಆದರೆ ವಿಧಾನಸೌಧದಿಂದ ಶಕ್ತಿ ಭವನಕ್ಕೆ ಬರುವ ಬದಲು ಮುಖ್ಯಮಂತ್ರಿ ಅಜ್ಞಾತ ಸ್ಥಳಕ್ಕೆ ತೆರಳಿದರು.

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ಮೂರು ಗಂಟೆ ಕಾಲ ಕೆಲವು ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಗಳು ನಡೆಯುವಾಗ ಗಣ್ಯರು ಭೇಟಿಗೆ ಬಂದು ಸಮಯ ವ್ಯಯವಾಗುವುದನ್ನು ತಪ್ಪಿಸಲು ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಿದರು ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.