ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿಸಂಹಿತೆಯ ಉಲ್ಲಂಘನೆ: ಪಕ್ಷಗಳ ಅಧ್ಯಕ್ಷರಿಗೆ ಚುನಾವಣಾ ಆಯೋಗದ ಪತ್ರ

Last Updated 17 ಡಿಸೆಂಬರ್ 2020, 19:32 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ತಡೆಗಟ್ಟುವ ಉದ್ದೇಶದಿಂದ ಎಲ್ಲ ಪಕ್ಷಗಳ ರಾಜ್ಯ ಘಟಕಗಳ ಅಧ್ಯಕ್ಷರಿಗೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ, ಪಕ್ಷದ ಮುಖಂಡರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಮಾದರಿ ನೀತಿಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಾತೀತ, ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಬೇಕಿದೆ. ಈ ಕಾರಣಕ್ಕೆ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ನಡೆಸಬಾರದು, ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ, ಪಕ್ಷಗಳ ಧ್ವಜ ಮತ್ತು ಚಿಹ್ನೆ ಬಳಸಿಕೊಂಡು ಪ್ರಚಾರ ಮಾಡಬಾರದು ಎಂದೂ ಪತ್ರದಲ್ಲಿ ಆಯೋಗ ಸೂಚಿಸಿದೆ.

ಪಕ್ಷಗಳ ಮುಖಂಡರು ಚುನಾವಣಾ ಪ್ರಚಾರಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗವಹಿಸಿದರೆ ಮಾದರಿ ನೀತಿಸಂಹಿತೆಯ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದೂ ಪತ್ರದಲ್ಲಿ ಆಯೋಗ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT