ವಿಜಯಪುರ: 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸ್ಫೋಟ ಸೇರಿದಂತೆ ವಿವಿಧ ಭಯೋತ್ಪಾದನಾ ಸಂಬಂಧಿತ ಘಟನೆಗಳಲ್ಲಿ ಭಾಗಿಯಾಗಿರುವ ಮುಖ್ಯ ಆರೋಪಿಯನ್ನು ತಮಿಳುನಾಡು ಪೊಲೀಸ್, ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಗುಪ್ತಚರ ಇಲಾಖೆ ನೆರವಿನ ಮೇರೆಗೆ ವಿಜಯಪುರ ನಗರದಲ್ಲಿ ಬಂಧಿಸಿದ್ದಾರೆ.

ಸಾದಿಕ್ ರಾಜಾ ಅಲಿಯಾಸ್ ಟೈಲರ್ ರಾಜಾ ಅಲಿಯಾಸ್ ಶಹಜಹಾನ್ ಅಬ್ದುಲ್ ಮಜೀದ್ ಮಕಾಂದರ್ ಅಲಿಯಾಸ್ ಶಹಜಹಾನ್ ಶೇಕ್ (50) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಾದಿಕ್ ರಾಜಾ ಕೊಮತ್ತೂರು ಸ್ಫೋಟ ಪ್ರಕರಣದ ಬಳಿಕ ರಾಜ್ಯದ ಹುಬ್ಬಳ್ಳಿ ಮತ್ತು ವಿಜಯಪುರ ನಗರದಲ್ಲಿ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ.

ಹುಬ್ಬಳ್ಳಿಯ ಮಹಿಳೆಯೊಬ್ಬರನ್ನು ವಿವಾಹವಾಗಿದ್ದ ಆರೋಪಿಯು, ಕಳೆದ 12 ವರ್ಷಗಳಿಂದ ವಿಜಯಪುರ ನಗರದಲ್ಲಿ ತರಕಾರಿ ಮಾರಾಟ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಸಂಬಂಧ ತಮಿಳುನಾಡು ಪೊಲೀಸರು ಆರೋಪಿಯನ್ನು ಕೊಯಮತ್ತೂರಿಗೆ ಕರೆದೊಯ್ದು, ಕೋರ್ಟ್ಗೆ ಹಾಜರು ಪಡಿಸಿದ್ದಾರೆ.

1998ರಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರನ್ನು ಗುರಿಯಾಗಿಸಿಕೊಂಡು ನಡೆಸಿದ್ದ ಸ್ಫೋಟದಲ್ಲಿ 58 ಜನರು ಸಾವನ್ನಪ್ಪಿದರು ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡರು.

1996ರಲ್ಲಿ ಕೊಯಮತ್ತೂರು ಜೈಲಿನಲ್ಲಿ ನಡೆದ ಈತ ನಡೆಸಿದ್ದ ಪೆಟ್ರೋಲ್ ಬಾಂಬ್ ದಾಳಿಯಲ್ಲಿ ಜೈಲು ವಾರ್ಡನ್ ಸಾವನ್ನಪ್ಪಿದರು.

‘ಭಯೋತ್ಪಾದನಾ ಪ್ರಕರಣಗಳ ಜೊತೆಗೆ, 1996ರಲ್ಲಿ ನಾಗೂರಲ್ಲಿ ನಡೆದ ಸಯೀತಾ ಕೊಲೆ ಪ್ರಕರಣ ಮತ್ತು 1997ರಲ್ಲಿ ಮಧುರೈನಲ್ಲಿ ನಡೆದ ಜೈಲರ್ ಜಯಪ್ರಕಾಶ್ ಅವರ ಕೊಲೆ ಪ್ರಕರಣದಲ್ಲಿ ಟೈಲರ್ ರಾಜಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಯಮತ್ತೂರಿನಲ್ಲಿ ನಡೆದ ಸ್ಫೋಟಕ್ಕೆ ಕಾರಣ

1997ರ ನವೆಂಬರ್– ಡಿಸೆಂಬರ್ನಲ್ಲಿ ಕೊಯಮತ್ತೂರಿನಲ್ಲಿ ಹಿಂದೂ–ಮುಸ್ಲಿಂ ಗಲಾಟೆಗಳು ನಡೆದಿದ್ದವು. ಆಲ್ ಉಮ್ಮಾ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ್ದಾರೆ ಎಂದು ಆ ಸಂಘಟನೆಯ ಕೆಲವರು ಸ್ಥಳೀಯ ಪೊಲೀಸ್ ಕಾನ್ಸ್ಟೆಬಲ್ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪ್ರತಿಯಾಗಿ ಕೊಯಮತ್ತೂರಿನಲ್ಲಿ ಸರಣಿ ಕೋಮು ಗಲಭೆಗಳು ನಡೆದಿದ್ದವು. ಆ ಗಲಭೆಗಳಲ್ಲಿ 18 ಮುಸ್ಲಿಮರು, 2 ಹಿಂದೂಗಳು ಸೇರಿ 20 ಜನ ಮೃತರಾಗಿದ್ದರು. ಇದಕ್ಕೆ ಪ್ರತಿಯಾಗಿ ಟೈಲರ್ ರಾಜಾ ಹಾಗೂ ಇತರರು ಬಿಜೆಪಿ ನಾಯಕ ಎಲ್ಕೆ ಅಡ್ವಾಣಿ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದರು. 1998 ಫೆಬ್ರುವರಿ 14 ರಂದು ಅಡ್ವಾಣಿ ಅವರು ಕೊಯಮತ್ತೂರಿಗೆ ಚುನಾವಣಾ ಸಭೆಗೆ ಬಂದಿದ್ದರು. ಅವರು ಬರುವ ಸಮಯದಲ್ಲಿ ಕೊಯಮತ್ತೂರಿನ 12 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 12 ಸ್ಥಳಗಳಲ್ಲಿ 11 ಸರಣಿ ಬಾಂಬ್ ಸ್ಫೋಟಗೊಂಡು 58 ಜನ ಮೃತರಾಗಿದ್ದರು. 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಪೊಲೀಸ್ ಮುಂಜಾಗ್ರತೆಯಿಂದ ಎಲ್.ಕೆ ಅಡ್ವಾಣಿ ಬದುಕುಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.