-‘ವಾರದ ಹಿಂದೆ ಹೆಣ್ಣು ಮಗಳೊಬ್ಬಳು ಪೋಷಕರ ಜತೆಗೆ ಬಂದು ದೂರು ನೀಡಿದ್ದಳು. ಆ ಮಗುವಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಾ ಶೋಷಣೆ ಮಾಡಿರುವುದು ಗೊತ್ತಾಗಿದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳನ್ನೂ ಬಳಸಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೂ ತನ್ನ ಹೇಳಿಕೆ ದಾಖಲಿಸಿದ್ದಾಳೆ’ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ‘ಹೆಣ್ಣು ಮಗಳು ಧೈರ್ಯ ತೋರಿ ದೂರು ನೀಡಿದ್ದಾಳೆ. ಬ್ಲ್ಯಾಕ್‌ಮೇಲ್‌ಗೆ ಒಳಗಾಗದೇ ದೂರು ನೀಡಬೇಕು. ಹೆದರಿಕೊಂಡರೆ ನೀವೇ ಬಲಿಪಶು ಆಗುತ್ತೀರಿ. ಆರೋಪಿಗಳು ಶೋಷಣೆ ಮಾಡುತ್ತಲೇ ಇರುತ್ತಾರೆ. ಯಾವುದಾದರೂ ತಪ್ಪುಗಳು ನಡೆದರೆ ತಂದೆ –ತಾಯಿಗೆ ಮೊದಲು ತಿಳಿಸಬೇಕು. ನಂತರ ಹತ್ತಿರದ ಠಾಣೆಗೆ ಮಾಹಿತಿ ನೀಡಬೇಕು. ಅದೂ ಸಾಧ್ಯವಾಗದಿದ್ದರೆ ಮಹಿಳಾ ಆಯೋಗಕ್ಕೆ ತಿಳಿಸಿ’ ಎಂದು ನಾಗಲಕ್ಷ್ಮೀ ಮನವಿ ಮಾಡಿದರು.