ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿ: ಆ.17ರಿಂದ ಪದವಿ ತರಗತಿ ಆರಂಭ

ಅಶ್ವತ್ಥನಾರಾಯಣ ಹೇಳಿಕೆ
Last Updated 9 ಜುಲೈ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಕಡ್ಡಾಯವಾಗಿ ಪಾಲಿಸಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಏಕರೂಪದ ವೇಳಾಪಟ್ಟಿಯಂತೆ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶ ಪ್ರಕ್ರಿಯೆಗಳು ಆರಂಭವಾಗಲಿದೆ. ಆ.17ರಿಂದ 22ರ ಮಧ್ಯೆ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅ.15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ನ.2ರಿಂದ 14ರ ಮಧ್ಯೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದು ಹೇಳಿದರು.

ಇದುವರೆಗೂ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪ್ರತ್ಯೇಕ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದ ವಿದ್ಯಾರ್ಥಿಗಳಿಗೆ ಗೊಂದಲ, ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಏಕರೂಪದ ವೇಳಾಪಟ್ಟಿ ತರಲಾಗಿದೆ ಎಂದು ಸಚಿವರು ವಿವರ ನೀಡಿದರು.

ಈ ವೇಳಾಪಟ್ಟಿಯಲ್ಲಿ ಪ್ರತಿ ಸೆಮಿಸ್ಟರ್‌ಗಳ ಆರಂಭ, ದಂಡ ರಹಿತ ಮತ್ತು ದಂಡ ಸಹಿತ ಪ್ರವೇಶದ ಅವಧಿ, ಪ್ರತಿ ಸೆಮಿಸ್ಟರ್‌ಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT