ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ವರಾಳೆ: ಕೊಲಿಜಿಯಂ ಶಿಫಾರಸು

Published 19 ಜನವರಿ 2024, 15:54 IST
Last Updated 19 ಜನವರಿ 2024, 15:54 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ (ಪಿ.ಬಿ) ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ. 

ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಕುಮಾರ್ ಅವರು ಫೆಬ್ರುವರಿ 24ರಂದು ನಿವೃತ್ತರಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಕೊಲಿಜಿಯಂ, ‘ನ್ಯಾಯಮೂರ್ತಿ ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಅತ್ಯಂತ ಹಿರಿಯ ನ್ಯಾಯಮೂರ್ತಿ. ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಪೈಕಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ನ್ಯಾಯಮೂರ್ತಿ’ ಎಂಬ ಅಂಶವನ್ನು ಗಮನಿಸಿತು. 

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು 2023ರ ಡಿಸೆಂಬರ್‌ 25ರಂದು ನಿವೃತ್ತರಾದ ನಂತರ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಮೂರ್ತಿ ಹುದ್ದೆಯೊಂದು ಖಾಲಿ ಇದೆ. 

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯವರಾದ ನ್ಯಾಯಮೂರ್ತಿ ವರಾಳೆ 1985ರ ಆಗಸ್ಟ್‌ನಲ್ಲಿ ವಕೀಲಿಕೆ ಸನ್ನದು ಪಡೆದು, ಎಸ್. ಎನ್. ಲೋಯಾ ಅವರ ಕಚೇರಿಯಲ್ಲಿ ವೃತ್ತಿ ಆರಂಭಿಸಿದ್ದರು. 1992ರವರೆಗೆ ಔರಂಗಾಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ 2008ರ ಜುಲೈ 18ರಂದು ನೇಮಕಗೊಂಡಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ 2022ರ ಅಕ್ಟೋಬರ್ 12ರಂದು ನೇಮಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT