ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಮೆಡ್‌–ಕೆ ಪರೀಕ್ಷೆ

Published 11 ಮೇ 2024, 16:07 IST
Last Updated 11 ಮೇ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಇದೇ ಭಾನುವಾರ (ಮೇ 12) ಪರೀಕ್ಷೆ ನಡೆಸುತ್ತಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, 28 ರಾಜ್ಯಗಳು, 189 ನಗರಗಳು ಮತ್ತು 264 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 1ರಿಂದ 4 ರವರೆಗೆ, ಸಂಜೆ 5.30ರಿಂದ 8.30ರವರೆಗೆ ಮೂರು ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಕರ್ನಾಟಕದ 150 ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಭಾರತದ 50ಕ್ಕೂ ಹೆಚ್ಚು ಖಾಸಗಿ ಹಾಗೂ ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

1.18 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕಿಂತ 20 ಸಾವಿರಕ್ಕೂ ಹೆಚ್ಚು ನೋಂದಣಿಯಾಗಿದೆ. ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಂಡ ಪ್ರವೇಶ ಪತ್ರದ ಜತೆಗೆ ಇತ್ತೀಚಿನ ಎರಡು ಭಾವಚಿತ್ರ, ಗುರುತು ಪತ್ರಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಕಾಮೆಡ್‌–ಕೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT