ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಮೆಡ್‌–ಕೆ: ಮೂರನೇ ಸುತ್ತು ಮುಂದೂಡಿಕೆ

Published 28 ಆಗಸ್ಟ್ 2024, 15:04 IST
Last Updated 28 ಆಗಸ್ಟ್ 2024, 15:04 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡಕ್ಕೆ ಮಣಿದ ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್‌–ಕೆ) ಮೂರನೇ ಸುತ್ತಿನ ಕೌನ್ಸೆಲಿಂಗ್‌ ಮುಂದೂಡಿದೆ.

ಕಾಮೆಡ್‌–ಕೆ ಆ.26ರಿಂದ 30ರವರೆಗೆ ಮೂರನೇ ಸುತ್ತಿನ ಕೌನ್ಸೆಲಿಂಗ್‌ ನಿಗದಿಪಡಿಸಿತ್ತು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆ.1ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಮಾಡುತ್ತಿದ್ದು, ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದೂಡುವಂತೆ ಒತ್ತಾಯ ಮಾಡಿದ್ದರು. 

ಪರಿಷ್ಕೃತ ವೇಳಾಪಟ್ಟಿಯಂತೆ ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಸೆ. 1ರಿಂದ 3ರವರೆಗೆ, ಆಯ್ಕೆಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಸೆ. 4ರಿಂದ 6ರವರೆಗೆ, ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ. 9ರವರೆ, ಕಾಲೇಜುಗಳಿಗೆ ಪ್ರವೇಶ ಪಡೆಯಲು ಸೆ. 14ರವರೆಗೆ ಸಮಯ ನೀಡಲಾಗಿದೆ. ನಂತರ ಮೂರನೇ ಸುತ್ತು ಆರಂಭಿಸಲಾಗುತ್ತದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT