ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ) 2026–27ನೇ ಶೈಕ್ಷಣಿಕ ವರ್ಷದ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಮೇ 9ರಂದು ನಡೆಸಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೊದಲ 100 ಶ್ರೇಯಾಂಕಗಳ ಪಟ್ಟಿಯಲ್ಲಿ ಕರ್ನಾಟಕದ 30 ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ.

10 ಶ್ರೇಯಾಂಕಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸ್ಥಾನ ಪಡೆದಿಲ್ಲ. 90ರಿಂದ 100 ಪರ್ಸೆಂಟೈಲ್ ನಡುವೆ 11,207 ಅಭ್ಯರ್ಥಿಗಳು, 80ರಿಂದ 90 ಪರ್ಸೆಂಟೈಲ್ ನಡುವೆ 11,385 ಅಭ್ಯರ್ಥಿಗಳು ಮತ್ತು 70 ರಿಂದ 80 ಪರ್ಸೆಂಟೈಲ್ ನಡುವೆ 10,940 ಅಭ್ಯರ್ಥಿಗಳಿದ್ದಾರೆ.

ಮೊದಲ ಆರು ರ್ಯಾಂಕ್ಗಳಲ್ಲಿ ಐದರಲ್ಲಿ ಜಾರ್ಖಂಡ್ ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಜಾರ್ಖಂಡ್ನ ರಾಂಚಿಯ ದರ್ಶಿಲ್ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ದೇಶಾದ್ಯಂತ 171 ನಗರಗಳ 303 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 1,10,774 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಕೌನ್ಸೆಲಿಂಗ್ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನಡೆಯಲಿದೆ. ಅಭ್ಯರ್ಥಿಗಳು ದಾಖಲೆಗಳನ್ನು ತಮ್ಮ ಲಾಗಿನ್ ಮೂಲಕ ವೆಬ್ಸೈಟ್ನಲ್ಲಿ (www.comedk.org) ಅಪ್ಲೋಡ್ ಮಾಡಿಕೊಳ್ಳಬೇಕು. ಲಭ್ಯವಿರುವ ಸೀಟುಗಳ ಸಂಖ್ಯೆ, ಶುಲ್ಕ, ಕೌನ್ಸಿಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಕಾಮೆಡ್–ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಸ್.ಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.