ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ವರಿಷ್ಠರಿಗೆ: ಬಿ.ವೈ.ವಿಜಯೇಂದ್ರ

Published 3 ಮಾರ್ಚ್ 2024, 19:07 IST
Last Updated 3 ಮಾರ್ಚ್ 2024, 19:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಂಬಂಧ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಚರ್ಚೆ ನಡೆದಿದ್ದು,  ಚರ್ಚೆಗೆ ಬಂದ ಎಲ್ಲ ಆಕಾಂಕ್ಷಿಗಳ ಹೆಸರುಗಳನ್ನು ಇನ್ನು 2–3 ದಿನಗಳಲ್ಲಿ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಬ್ಬರು ವೀಕ್ಷಕರು ಕಳೆದ 2– 3 ದಿನಗಳಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಕಾರ್ಯಕರ್ತರು ಮತ್ತು ನಾಯಕರ ಜತೆ ಚರ್ಚಿಸಿ, ಆಕಾಂಕ್ಷಿಗಳ ಹೆಸರುಗಳನ್ನು ಸಂಗ್ರಹಿಸಿಕೊಂಡು ಬಂದಿದ್ದಾರೆ. ಆ ಹೆಸರುಗಳ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ನಡೆಯಿತು ಎಂದರು.

ರಾಜ್ಯದಲ್ಲಿ  28 ಸ್ಥಾನಗಳನ್ನೂ ಗೆಲ್ಲುವ ವಾತಾವರಣವಿದೆ. ಬಿಜೆಪಿ– ಜೆಡಿಎಸ್‌ ಜತೆಯಾಗಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಎಲ್ಲ ಸ್ಥಾನಗಳನ್ನು ಗೆದ್ದು ದಾಖಲೆ ಸೃಷ್ಟಿಸಬೇಕು ಎಂಬ ತೀರ್ಮಾನ ಸಭೆಯಲ್ಲಿ ಆಯಿತು. ಯಾರನ್ನೆಲ್ಲ ಕಣಕ್ಕೆ ಇಳಿಸಬೇಕು ಎಂಬ ತೀರ್ಮಾನವನ್ನು ವರಿಷ್ಠರೇ ತೆಗೆದುಕೊಳ್ಳುತ್ತಾರೆ ಎಂದು ವಿಜಯೇಂದ್ರ ತಿಳಿಸಿದರು.

ಸಭೆಯಲ್ಲಿ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ಉಸ್ತುವಾರಿ ರಾಧಾಮೋಹನ್‌ ಅಗರ್‌ವಾಲ್‌, ಆರ್‌.ಅಶೋಕ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕರಾಜೋಳ, ಸಿ.ಟಿ.ರವಿ, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT