ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಸಂಕೀರ್ಣ: ಮರು ನಿರ್ಮಾಣಕ್ಕೆ ವಿರೋಧ

Last Updated 30 ಜೂನ್ 2021, 21:33 IST
ಅಕ್ಷರ ಗಾತ್ರ

ಬೆಂಗಳೂರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ನಗರದ ಏಳು ವಾಣಿಜ್ಯ ಸಂಕೀರ್ಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಮರು ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಆಮ್‌ ಆದ್ಮಿ ಪಕ್ಷ (ಎಎಪಿ) ವಿರೋಧ ವ್ಯಕ್ತಪಡಿಸಿದೆ.

‘ವಾಣಿಜ್ಯ ಸಂಕೀರ್ಣಗಳನ್ನು ಒಡೆಯಲು ಹಾಗೂ ಅವು ಖಾಸಗಿಯವರ ಪಾಲಾಗಲು ಬಿಡುವುದಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ಕೂಡ ಇದೇ ಯೋಜನೆಗೆ ಕೈಹಾಕಿತ್ತು. ಭಾರೀ ವಿರೋಧ ವ್ಯಕ್ತವಾದ ಕಾರಣ ಯೋಜನೆಯನ್ನು ಜಾರಿಗೆ ತಂದಿರಲಿಲ್ಲ. ಆಗ ವಿರೋಧಿಸಿದ್ದ ಬಿಜೆಪಿಯವರೇ ಈಗ ಮರುನಿರ್ಮಾಣದ ಹೆಸರಿನಲ್ಲಿ ದುಡ್ಡು ಮಾಡಲು ಹೊರಟಿದ್ದಾರೆ. ವಿರೋಧ ಪಕ್ಷದಲ್ಲಿದ್ದಾಗ ಒಂದು ನಿಲುವು, ಅಧಿಕಾರದಲ್ಲಿದ್ದಾಗ ಮತ್ತೊಂದು ನಿಲುವು ತೆಗೆದುಕೊಳ್ಳುವ ಬಿಜೆಪಿಗೆ ನಾಚಿಕೆಯಾಗಬೇಕು’ ಎಂದು ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಬಿಡಿಎ ವಾಣಿಜ್ಯ ಸಂಕೀರ್ಣಗಳು ಅಮೂಲ್ಯವಾದ ಸರ್ಕಾರಿ ಸ್ವತ್ತುಗಳು. ಮರುನಿರ್ಮಾಣದ ಹೆಸರಿನಲ್ಲಿ ಬರೋಬ್ಬರಿ ₹ 5 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಖಾಸಗಿಯವರಿಂದ ಬಿಡಿಎ ಅಧ್ಯಕ್ಷರಿಗೆ ಭಾರೀ ಪ್ರಮಾಣದ ಕಿಕ್‌ಬ್ಯಾಕ್‌ ಸಿಗಲಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT