ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯ ಏಕಸದಸ್ಯ ವಿಚಾರಣಾ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರವು ಇದೇ ಜುಲೈ 31ರವರೆಗೆ ವಿಸ್ತರಿಸಿದೆ.

ಆಯೋಗದ ಅವಧಿಯು ಮೇ 31ರ ಶನಿವಾರದಂದು ಕೊನೆಯಾಗಬೇಕಿತ್ತು. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಆಯೋಗವು ಕೈಗೊಂಡಿರುವ ಸಮಗ್ರ ಸಮೀಕ್ಷೆಯು ಜೂನ್ 1ರವರೆಗೂ ನಡೆಯಲಿದೆ. ಸಮೀಕ್ಷೆಯ ದತ್ತಾಂಶಗಳನ್ನು ಪರಿಶೀಲಿಸಿ, ಕೊರತೆಗಳನ್ನು ಸರಿಪಡಿಸಿ ಅಂತಿಮ ಶಿಫಾರಸು ನೀಡಲು ಇನ್ನೂ ಎರಡು ತಿಂಗಳ ಕಾಲಾವಕಾಶ ಬೇಕು ಎಂದು ಆಯೋಗದ ಅಧ್ಯಕ್ಷರು ಕೋರಿದ್ದರು ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.

ಹೀಗಾಗಿ ಆಯೋಗದ ಅವಧಿಯನ್ನು ಜುಲೈ 31ರವರೆಗೆ ಎರಡು ತಿಂಗಳು ವಿಸ್ತರಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.