ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಎಲ್ಲ ಆಯಾಮದಿಂದಲೂ ತನಿಖೆ ನಡೆಸಿ, ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರರ ವಿರುದ್ಧ ದೋಷಾರೋಪ ಪಟ್ಟಿಯನ್ನು 24ನೇ ಎಸಿಸಿಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.
ತಾಂತ್ರಿಕ ಸಾಕ್ಷ್ಯ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ಹಾಗೂ ಹೈದರಾಬಾದ್‌ನ ಎಫ್‌ಎಸ್‌ಎಲ್‌ನಿಂದ ಎಲ್ಲ ವರದಿಗಳು ಬಂದಿವೆ. ಸಿಎಫ್‌ಎಲ್‌ನ ಕೆಲವು ವರದಿಗಳು ಬರಬೇಕಿದೆ. ನಂತರ ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಪೊಲೀಸರು ಹೇಳಿದರು.