‘ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳ ಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ’ ಎಂದರು.