ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ, ಅಸಮಾನತೆ ನಿವಾರಣೆಗೆ ಸರ್ಕಾರ ಬದ್ಧವಾಗಿದೆ. ಸಾಹಿತಿಗಳು, ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಆತಂಕ ಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಶನಿವಾರ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ನ್ಯೂನತೆಗಳನ್ನು ಹೋಗಲಾಡಿಸಲು ಶ್ರಮಿಸಬೇಕು. ಜಾತಿಯ ಕಾರಣಕ್ಕಾಗಿಯೇ ಹಲವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ ಸೃಷ್ಟಿಯಾಗಿದೆ. ಈ ಅಸಮಾನತೆ ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದ ನೆಲೆಸುತ್ತದೆ. ಸರ್ವರ ಅಭಿವೃದ್ಧಿಯಾಗುತ್ತದೆ ಎಂದರು.