ಹುಲಿ ಉಗುರು, ಹಲ್ಲು, ಚರ್ಮ ಸೇರಿದಂತೆ ಯಾವುದೇ ವನ್ಯಜೀವಿಯ ಅಂಗಾಂಗದಿಂದ ಮಾಡಿದ ವಸ್ತುಗಳ ಸಂಗ್ರಹ ಹಾಗೂ ಮಾರಾಟ ನಿಷೇಧಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972 ರ ಅಡಿಯಲ್ಲಿ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಕಾಯ್ದೆ ಜಾರಿಯ ನಂತರ ದಾಖಲಾದ ಪ್ರಕರಣಗಳು, ಶಿಕ್ಷೆಯ ಪ್ರಮಾಣ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಿತಿ ಒಂದು ವಾರದ ಒಳಗೆ ವರದಿ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದರು.