ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆ ಕಳವು: ಪರಿಶೀಲನೆಗೆ ಸಮಿತಿ ರಚನೆ

Published 9 ಮಾರ್ಚ್ 2024, 15:44 IST
Last Updated 9 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಕೋರ್ಸ್‌ಗಳಿಗೆ ಸೇರಿದ 97 ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ಕಳವಾಗಿರುವ ಕುರಿತು ಪರಿಶೀಲಿಸಲು ಬೆಂಗಳೂರು ವಿಶ್ವವಿದ್ಯಾಲಯ ಸಮಿತಿ ರಚಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ 2013ರಿಂದ 2023ರ ಅವಧಿಯಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ನಿಗೂಢವಾಗಿ ನಾಪತ್ತೆಯಾಗಿದ್ದವು. ಹಾಗಾಗಿ, 97 ವಿದ್ಯಾರ್ಥಿಗಳಿಗೆ ಫಲಿತಾಂಶ ಹಾಗೂ ಪದವಿ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಿರಲಿಲ್ಲ.

ಫಲಿತಾಂಶ ಹಾಗೂ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳು ಅಲೆದಾಡುತ್ತಿರುವ ವಿಷಯ ಈಚೆಗೆ ನಡೆದ ಸಿಂಡಿಕೇಟ್‌ ಸಭೆಯಲ್ಲೂ ಚರ್ಚೆಯಾಗಿತ್ತು. ಸಮಸ್ಯೆ ಬಗೆಹರಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ದೊರಕಿಸಲು ಸಮಿತಿ ರಚಿಸುವಂತೆ ಸಿಂಡಿಕೇಟ್‌ ಸಲಹೆ ನೀಡಿತ್ತು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT