ಬೆಂಗಳೂರು: ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯವರೆಂಬ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಿಸುವ ದುರುದ್ದೇಶದಿಂದ ಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ ಉಲ್ಲೇಖಿಸಿ ‘ಎಕ್ಸ್’ ಮಾಡಿರುವ ಮುಖ್ಯಮಂತ್ರಿ, ‘ಧಾರ್ಮಿಕ ಮೂಲಭೂತವಾದ, ಕೋಮು ವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲದು ಎಂಬುದಕ್ಕೆ ಪುಟ್ಟ ಮಕ್ಕಳ ಮಾರಣ ಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ’ ಎಂದಿದ್ದಾರೆ.

‘ದಯೆಯೇ ಧರ್ಮದ ಮೂಲವಯ್ಯ’ ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕ್ರೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ಬಿ.ವೈ. ವಿಜಯೇಂದ್ರ ಹೊರುವರೇ? ಆರ್. ಅಶೋಕ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ’ ಎಂದು ಮುಖ್ಯಮಂತ್ರಿ ಕುಟುಕಿದ್ದಾರೆ.

‘ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಕಾರ್ಯಪಡೆ ರಚಿಸಿದ್ದೇವೆ. ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂತಹ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ. ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಪೊಲೀಸ್ ಸಿಬ್ಬಂದಿ ಭೇದಿಸಿದ್ದಾರೆ. ಇಂತಹ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕ ಶಿಕ್ಷೆ ನೀಡಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.