ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ಸತ್ಯಾಸತ್ಯತೆ ಮತ್ತು ನೈಜತೆಯ ವರದಿ ಪಡೆಯಲು ಪಕ್ಷದಿಂದ ನಿಯೋಗ ಕಳುಹಿಸಲು ಕೆಪಿಸಿಸಿ ನಿರ್ಧರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಎನ್.ಎ. ಹ್ಯಾರಿಸ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಮತ್ತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಈ ನಿಯೋಗದಲ್ಲಿದ್ದಾರೆ.

'ಕರಾವಳಿ ಜಿಲ್ಲೆಗಳಲ್ಲಿ ನಡೆದ ಪ್ರಕರಣಗಳು ಮಾಧ್ಯಮಗಳಲ್ಲಿ ಕೊಲೆ, ಸುಲಿಗೆ, ಕೋಮುಗಲಭೆ ಎಂಬ ವ್ಯಾಖ್ಯಾನಗಳಿಂದ ವ್ಯಾಪಕವಾಗಿ ಪ್ರಚಾರವಾಗುತ್ತಿದೆ. ಈ ಕಾರಣಕ್ಕೆ ಈ ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಘಟನೆ ನಡೆದ ಪ್ರದೇಶಗಳಲ್ಲಿ ಸಂಬಂಧಪಟ್ಟ ಸಂತ್ರಸ್ತ ಕುಟುಂಬಗಳು, ಎಲ್ಲ ವರ್ಗಗಳ ಜನರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇತರರೊಂದಿಗೆ ಚರ್ಚಿಸಿ ಈ ಎಲ್ಲಾಯ ಪ್ರಕರಣಗಳ ಬಗ್ಗೆ, ಕೂಲಂಕಷವಾಗಿ ಪರಾಮರ್ಶಿಸಿ ಒಂದು ವಾರದ ಒಳಗೆ ಸಮಗ್ರ ವರದಿ ನೀಡಲು ಈ ಸಮಿತಿ ರಚಿಸಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.