ಬೆಂಗಳೂರು: ‘ಕೋಮು ಗಲಭೆಗೆ ಕಾರಣರಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಮನೆಯಲ್ಲಿ ಗುರುವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಹರಿಪ್ರಸಾದ್ ಜೊತೆ ಚರ್ಚೆ ನಡೆಸಿದ್ದೇನೆ’ ಎಂದರು.

ಪರಿಸ್ಥಿತಿ ನಿಭಾಯಿಸಲು ವಿಫಲ:

ಮಂಗಳೂರಿನಲ್ಲಿ ನಡೆದ ಕೊಲೆ ಘಟನೆಗಳ ನಂತರದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಮಾಡುವಲ್ಲಿ ಉಳ್ಳಾಲ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ವಿಫಲವಾಗಿರುವ ಬಗ್ಗೆ ಹರಿಪ್ರಸಾದ್ ಜೊತೆ ಮುಖ್ಯಮಂತ್ರಿ ವಿಚಾರ ವಿನಿಮಯ ನಡೆಸಿದರು. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಿ ಪರಿಶೀಲನೆ ನಡೆಸುವಂತೆ ಜವಾಬ್ದಾರಿ ನೀಡಿದ್ದಾರೆ ಎಂದು ಗೊತ್ತಾಗಿದೆ.

ಪೊಲೀಸರ ಕಾರ್ಯವೈಖರಿಯ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿ ಹೊಸಬರನ್ನು ನಿಯೋಜಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಪಕ್ಷ ಚಟುವಟಿಕೆಯ ಮೇಲೆ ನಿಗಾ ಇಡುವ ಜೊತೆಗೆ ಶಾಂತಿ, ಸೌಹಾರ್ದತೆ ನೆಲೆಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡುವಂತೆ ಹರಿಪ್ರಸಾದ್ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನದ ಬಗ್ಗೆಯೂ ಹರಿಪ್ರಸಾದ್ ಅವರ ಜೊತೆ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ. ಆದರೆ, ಸಭಾಪತಿ ಸ್ಥಾನವನ್ನು ಈಗಾಗಲೇ ನಿರಾಕರಿಸಿರುವ ಅವರು, ಈ ಹಿಂದಿನ ಮಾತನ್ನೇ ಪುನರುಚ್ಚರಿಸಿದ್ದಾರೆ ಎಂದು ಗೊತ್ತಾಗಿದೆ.

ಎರಡು ದಿನ ಸಭೆ: ‘ಮುಂಗಾರು ಮಳೆ ಪರಿಸ್ಥಿತಿ ಮತ್ತು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶುಕ್ರವಾರ ಮತ್ತು ಶನಿವಾರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.