ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ.
Published 8 ಮೇ 2024, 11:04 IST
Last Updated 8 ಮೇ 2024, 11:04 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ. ಇಂತಹ ಹೋಲಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

'ಎಕ್ಸ್‌' ಮೂಲಕ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿರುವ ಅವರು, ಈ ಹೇಳಿಕೆ ನೋಡಿದರೆ ನೆಹರೂ–ಗಾಂಧಿ ಕುಟುಂಬದ ವಸಾಹತು ಮನಸ್ಥಿತಿಯನ್ನು ಬಿಂಬಿಸುತ್ತದೆ.

ಕಾಂಗ್ರೆಸ್‌ ಪಕ್ಷದ ಇಂತಹ ವಿಭಜಕ ನೀತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಏನು? ಕನ್ನಡದ ಹೆಮ್ಮೆಯ ಬಗ್ಗೆ ಮಾತನಾಡುವ ಇವರು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT