ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್ಹೋಲ್ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರ್ಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.

ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ ₹18.5 ಲಕ್ಷ ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸರ್ಕಾರ ತಕ್ಷಣವೇ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಇದನ್ನೂ ಓದಿ... ನಿರ್ಮಾಣ ಹಂತದ ಮ್ಯಾನ್ ಹೋಲ್ಗೆ ಇಳಿದ ಮೂವರು ಕಾರ್ಮಿಕರ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.