ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರನ್ನು ಮುಗಿಸಿ’ ಎಂದು ಹೇಳಿಕೆ ನೀಡಿರುವ ಆರೋಪದ ಮೇಲೆ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅವರ ವಿರುದ್ಧ, ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ ಅವರು ನಗರದ ಗೋಕುಲ ರಸ್ತೆ ಪೊಲೀಸ್ ಠಾಣೆಗೆ ಗುರುವಾರ ದೂರು ಕೊಟ್ಟಿದ್ದಾರೆ.

ಅಶ್ವತ್ಥ ನಾರಾಯಣ ಅವರು, ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಕೊಲೆಗೆ ಸಾರ್ವಜನಿಕವಾಗಿ ಕರೆ ಕೊಟ್ಟಿದ್ದಾರೆ. ಹಾಗಾಗಿ, ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

‘ದೂರು ಕುರಿತು ಮಂಡ್ಯ ಪೊಲೀಸರ ಗಮನಕ್ಕೆ ತರಲಾಗಿದೆ. ಒಂದು ವೇಳೆ ಅಲ್ಲೇನಾದರೂ ಪ್ರಕರಣ ದಾಖಲಾಗಿದ್ದರೆ, ಈ ದೂರನ್ನು ಸಹ ಅಲ್ಲಿಗೆ ವರ್ಗಾಯಿಸಲಾಗುವುದು. ಇಲ್ಲದಿದ್ದರೆ, ಇಲ್ಲಿಯೇ ಎಫ್‌ಐಆರ್ ಮಾಡಲಾಗುವುದು’ ಎಂದು ಗೋಕುಲ ರಸ್ತೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ...

ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು: ಸಚಿವ ಅಶ್ವತ್ಥ್ನಾರಾಯಣ ವಿಡಿಯೊ

ಟಿಪ್ಪು ವಿಚಾರವಾಗಿ ವಾಕ್ಸಮರ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ಅಶ್ವತ್ಥ ನಾರಾಯಣ ಹೇಳಿಕೆ ಸರಿಯೇ? ಮೋದಿ, ಅಮಿತ್ ಶಾ ಉತ್ತರಿಸಲಿ: ಸಿದ್ದರಾಮಯ್ಯ

ಅಶ್ವತ್ಥನಾರಾಯಣ ಹೇಳಿಕೆ ಸರಿಯೇ? ಬೊಮ್ಮಾಯಿ, ಬಿಎಸ್ವೈ ಉತ್ತರಿಸಲಿ: ಡಿಕೆಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.