ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಉಪಮುಖ್ಯಮಂತ್ರಿ ನೇಮಕ ಹೇಳಿಕೆ: ಸಚಿವ ರಾಜಣ್ಣ ವಿರುದ್ಧ ಹೈಕಮಾಂಡ್‌ಗೆ ದೂರು

Published 21 ಸೆಪ್ಟೆಂಬರ್ 2023, 16:25 IST
Last Updated 21 ಸೆಪ್ಟೆಂಬರ್ 2023, 16:25 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಿಸಬೇಕು ಎಂಬ ಹೇಳಿಕೆ ನೀಡಿರುವ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. 

ನವದೆಹಲಿ ಭೇಟಿಯ ಸಂದರ್ಭದಲ್ಲಿ ಶಿವಕುಮಾರ್‌ ಅವರು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ದೂರು ನೀಡಿ, ‘ಇಂತಹ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡದಂತೆ ತಾಕೀತು ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ. 

‘ಮುಖ್ಯಮಂತ್ರಿ ಅವರ ಹೆಸರು ಉಲ್ಲೇಖಿಸದೆಯೇ ಹೇಳಿಕೆ ನೀಡಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್‌ ನೀಡಲಾಗಿದೆ. ಅದೇ ರೀತಿ, ರಾಜಣ್ಣ ಅವರಿಗೂ ನೋಟಿಸ್‌ ನೀಡಬೇಕು’ ಎಂಬುದಾಗಿ ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT