ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಸಂಸತ್ ಸ್ಥಾನದ ಅನರ್ಹತೆ ಖಂಡಿಸಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ ಆರಂಭ

Published 12 ಜುಲೈ 2023, 5:39 IST
Last Updated 12 ಜುಲೈ 2023, 5:39 IST
ಅಕ್ಷರ ಗಾತ್ರ

ಬೆಂಗಳೂರು: ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಸ್ಥಾನದ ಅನರ್ಹತೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬೆಳಿಗ್ಗೆಯಿಂದ ಮೌನ ಪ್ರತಿಭಟನೆ ಆರಂಭವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ಆರಂಭವಾಗಿದ್ದು ಇಂದು ಸಂಜೆ ವರೆಗೆ ನಡೆಯಲಿದೆ. ಕಾಂಗ್ರೆಸ್ ಮುಖಂಡರು, ಬಾಯಿಗೆ ಕಪ್ಪುಪಟ್ಟಿ‌ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿದಂತೆ ಹಲವು ಮುಖಂಡರು‌ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿದಂತೆ ಹಲವು ಮುಖಂಡರು‌ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಮೊಳಗಲಿ ಮೊಳಗಲಿ ಸತ್ಯ ಗರ್ಜನೆ ಮೊಳಗಲಿ, ಸತ್ಯವನ್ನು ಮುಚ್ಚಲಾಗದು ಎಂಬ ಭಿತ್ತಿಪತ್ರ‌ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿದಂತೆ ಹಲವು ಮುಖಂಡರು‌ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT