ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯ ನಿಧಿಯನ್ನು ಅನ್ಯ ಉದ್ದೇಶಕ್ಕೆ ಬಳಸಿರುವುದಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಮಾತನಾಡಿದ ರಾಹುಲ್, ‘ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರಾಜ್ಯದ ಮತದಾರರು ದೊಡ್ಡ ಮಟ್ಟದ ಬಹುಮತ ನೀಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳಿಂದ ಬೇಸತ್ತು ಜನರು ನಮ್ಮ ಕೈ ಹಿಡಿದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 14 ತಿಂಗಳುಗಳಷ್ಟೇ ಆಗಿವೆ. ಈ ಕಿರು ಅವಧಿಯಲ್ಲೇ ಸರ್ಕಾರಕ್ಕೆ ಕಳಂಕ ತಟ್ಟಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ನಿತ್ಯ ವಾಗ್ದಾಳಿ ನಡೆಸುತ್ತಿದ್ದಾರೆ. ಸಂಸತ್ನಲ್ಲಿ ನಿತ್ಯ ಚರ್ಚೆಯಾಗುತ್ತಿದೆ. ನಾವೆಲ್ಲ ಮುಜುಗರ ಅನುಭವಿಸುವಂತಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಾವು ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಈ ಸಮುದಾಯಗಳ ಮತಗಳ ನೆರವಿನಿಂದ ಪಕ್ಷ ಉತ್ತಮ ಸಾಧನೆ ಮಾಡಿದೆ. ಅವರ ಕಲ್ಯಾಣವೇ ನಮ್ಮ ಗುರಿ. ಆದರೆ, ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಬಿಂಬಿಸುತ್ತಿದೆ. ಈ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಗರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ನ ನಾಯಕರಿಗೆ ಮಂಗಳವಾರ ಸುದೀರ್ಘ ವಿವರಣೆ ನೀಡಿದರು. ಈ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದೂ ರಾಜ್ಯ ನಾಯಕರು ಸಮಜಾಯಿಷಿ ನೀಡಿದರು. ಈ ಮಾತುಗಳಿಂದ ರಾಹುಲ್ ಸಮಾಧಾನಗೊಳ್ಳಲಿಲ್ಲ. ಬಿಜೆಪಿ ತಂತ್ರಗಳಿಗೆ ತಕ್ಕ ತಿರುಗೇಟು ನೀಡಬೇಕು ಎಂದು ರಾಷ್ಟ್ರೀಯ ನಾಯಕರು ಸೂಚಿಸಿದರು. ಬಿಜೆಪಿ ಸರ್ಕಾರದ ಅವಧಿಯ ಅಕ್ರಮಗಳ ತನಿಖೆ ಕಥೆ ಏನಾಯಿತು ಎಂದೂ ಪ್ರಶ್ನಿಸಿದರು ಎಂದು ಗೊತ್ತಾಗಿದೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಅಂಟಿದ ಕಳಂಕಗಳ ಕುರಿತು ಹೈಕಮಾಂಡ್ ವರದಿ ಈಗಾಗಲೇ ತರಿಸಿಕೊಂಡಿದೆ. ರಾಜ್ಯದ ಜತೆಗೆ ನಿಕಟ ಸಂಪರ್ಕ ಹೊಂದಿರುವ ಸಂಸದರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಆರಂಭದಲ್ಲಿ ಖರ್ಗೆ ಅವರು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು. ರಾತ್ರಿ 8ರಿಂದ 9.30ರ ವರೆಗೆ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಖರ್ಗೆ, ಸಿದ್ದರಾಮಯ್ಯ, ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಹಾಗೂ ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭಾಗಿಯಾದರು.

‘ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ‘

‘ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ವಾಲ್ಮೀಕಿ ನಿಗಮದ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ನನ್ನ ಗುರಿ ಮಾಡುತ್ತಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ ಎಂದು ಬಿಂಬಿಸಲು ಹೊರಟಿದ್ದಾರೆ. ಮುಡಾದಲ್ಲಿ ಯಾವುದೇ ಅಕ್ರಮ ಆಗಿಲ್ಲ. ಎಲ್ಲವೂ ಕಾನೂನುಬದ್ಧವಾಗಿ ನಡೆದಿದೆ. ಹಗರಣದಲ್ಲಿ ಸರ್ಕಾರದ ಅಥವಾ ಹಣಕಾಸು ಇಲಾಖೆಯ ಪಾತ್ರ ಇಲ್ಲ. ಇದನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ’ ಎಂದು ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ ತಿಳಿಸಿದರು. ‘ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಜೆಟ್ನಿಂದ ಕರ್ನಾಟಕಕ್ಕೆ ನಯಾಪೈಸೆ ಉಪಯೋಗ ಆಗಿಲ್ಲ. ನಮ್ಮ ಸಂಸದರು ಇದನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದ್ದಾರೆ’ ಎಂದರು. ‘ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದವರು. ಅವರು ರಾಜ್ಯದ ಹಿತ ಕಾಪಾಡಿಲ್ಲ’ ಎಂದು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.