ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್(ಆರ್‌ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಭಾರತದ ಅತ್ಯಂತ ಸಿರಿವಂತ ವ್ಯಕ್ತಿಯಾಗಿ, ಉದ್ಯಮಿ ಗೌತಮ್ ಅದಾನಿ 2ನೇ ಸ್ಥಾನ ಪಡೆದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, 'ಬಡವಾದ ಭಾರತವನ್ನ ಅದಾನಿ, ಅಂಬಾನಿಗೆ ಅಡ ಇಡಲಾಗುತ್ತಿದೆ' ಎಂದು ದೂರಿದೆ.

'ಭಾರತ ಬಡವಾಗಿದೆ, ಮೋದಿ ಗೆಳೆಯರು ಸಿರಿವಂತರಾಗಿದ್ದಾರೆ. ಭಾರತದ ಆಸ್ತಿ ಮಾರಲಾಗುತ್ತಿದೆ, ಮೋದಿ ಗೆಳೆಯರ ಆಸ್ತಿ ಬೆಳೆಯುತ್ತಿದೆ. ಬಡವಾದ ಭಾರತವನ್ನ ಅದಾನಿ, ಅಂಬಾನಿಗೆ ಅಡ ಇಡಲಾಗುತ್ತಿದೆ' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

'ಪ್ರಜಾವಾಣಿ'ಯ ಅಂಬಾನಿ ದೇಶದ ಸಿರಿವಂತ ವ್ಯಕ್ತಿ (ಅ.01) ವರದಿಯನ್ನು ಹಂಚಿಕೊಂಡಿರುವ ಕಾಂಗ್ರೆಸ್, ಜನತೆ ಬಡವರಾಗಿರುವುದಷ್ಟೇ ಅಲ್ಲ, ಸರ್ಕಾರದ ಖಜಾನೆಯೂ ಖಾಲಿ, ಆದರೆ ಉದ್ಯಮಿಗಳು ಹೇಗೆ ಬೆಳೆದರು ಎಂದು ಜನತೆ ಯೋಚಿಸಿದರೆ ಮೋದಿಯವರ ಆಡಳಿತ ಅರ್ಥವಾಗಲಿದೆ ಎಂದು ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದೆ.

ಇವರು ಭಾರತದ ಸಿರಿವಂತರು: ಅಂಬಾನಿ ₹7 ಲಕ್ಷ ಕೋಟಿ ಒಡೆಯ, 2ನೇ ಸ್ಥಾನದಲ್ಲಿ ಅದಾನಿ

ಅದಾನಿ ಅವರು ಪ್ರತಿದಿನ 1 ಸಾವಿರ ಕೋಟಿ ಆದಾಯ ಗಳಿಸುತ್ತಿದ್ದಾರೆ ಎಂದು ಹುರೂನ್ ಇಂಡಿಯಾ ಸಿದ್ಧಪಡಿಸುವ 'ಐಐಎಫ್‌ಎಲ್ ವೆಲ್ತ್ ಹುರೂನ್ ಇಂಡಿಯಾ ರಿಚ್ ಲಿಸ್ಟ್ - 2021' ಬಿಡುಗಡೆ ಮಾಡಿದ ವರದಿಯಲ್ಲಿ ಮಾಹಿತಿ ನೀಡಿದೆ.

'10 ವರ್ಷಗಳ ಹಿಂದೆ ಈ ಪಟ್ಟಿಯಲ್ಲಿ ಸ್ಥಾನ ಪಡೆದವರ ಸಂಖ್ಯೆ 100ಕ್ಕಿಂತ ಕಡಿಮೆ ಇತ್ತು. ಈಗ ಅದು ಸಾವಿರಕ್ಕೆ ತಲುಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ 5 ವರ್ಷಗಳಲ್ಲಿ 2 ಸಾವಿರ ವ್ಯಕ್ತಿಗಳ ಹೆಸರು ಈ ಪಟ್ಟಿ ಸೇರಲಿವೆ' ಎಂದು ಹುರೂನ್ ಇಂಡಿಯಾ ಸಂಸ್ಥೆಯ ಮುಖ್ಯ ಸಂಶೋಧಕ ಅನಸ್ ರೆಹ್ಮಾನ್ ಜುನೈದ್ ಹೇಳಿದ್ದರು.

ಇನ್ನೂ 15ಲಕ್ಷಆರೋಗ್ಯಕಾರ್ಯಕರ್ತರಿಗೆಸಿಗಬೇಕಿದೆ2ನೇಕೋವಿಡ್ಲಸಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.