ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಅಂಗೀಕರವಾದ ಬೆನ್ನಲ್ಲೇ ನೂತನ ನಾಯಕನ ಆಯ್ಕೆಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ.

ಇದೀಗ ಎಲ್ಲರ ಕಣ್ಣು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆಶಿ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಮೇಲ್ನೋಟದಲ್ಲಿ ಸಭೆ ನಡೆಯಲಿದೆ.

ಶುಕ್ರವಾರದಂದು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ.

ಮೂಲಗಳ ಪ್ರಕಾರ, ಹೊಸ ಸಿಎಲ್ಪಿ ನಾಯಕರಾಗಿ ಡಿಕೆಶಿ ಅವರ ಹೆಸರನ್ನು ಸಿದ್ದರಾಮಯ್ಯ ಸೂಚಿಸಲಿದ್ದಾರೆ. ಬಳಿಕ ಮುಂದಿನ ನಾಯಕನನ್ನು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕಾರ ಮಾಡಲಾಗುವುದು.

ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ಭಾನುವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆ ಇದೆ.
.ನನ್ನ ರಾಜಕೀಯ ಬದುಕಿಗೆ ಸಿದ್ದರಾಮಯ್ಯ ಮಾರ್ಗದರ್ಶನ: ಪ್ರಿಯಾಂಕ್ ಖರ್ಗೆ.ಹೈಕಮಾಂಡ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಸಚಿವಗಿರಿಗೆ ಲಾಬಿ ಜೋರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.