ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಲ್‌ಪಿ ಸಭೆ: ಸಮೀಕ್ಷೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಚರ್ಚೆ

Published 2 ಜೂನ್ 2024, 16:28 IST
Last Updated 2 ಜೂನ್ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳು ಹಾಗೂ ವಿಧಾನಸಭೆಯಿಂದ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಭಾನುವಾರ ನಡೆಯಿತು.

ವಿಧಾನಸಭೆಯಿಂದ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನ. ಈ ಪೈಕಿ, ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಸಭೆಗೆ ಪರಿಚಯಿಸಿ ಅಭ್ಯರ್ಥಿಗಳ ನಾಮಪತ್ರಗಳಿಗೆ ಸೂಚಕರು, ಅನುಮೋದಕರ ಸಹಿ ಪಡೆಯಲಾಯಿತು. ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಎಲ್ಲ ಶಾಸಕರಿಗೆ ಸೂಚಿಸಲಾಯಿತು.

ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಬಗ್ಗೆಯೂ ಚರ್ಚೆ ನಡೆಯಿತು. ಪಕ್ಷದ ಮಾಹಿತಿಯಂತೆ ‘ಇಂಡಿಯಾ’ ಮೈತ್ರಿಕೂಟ ಹೆಚ್ಚು ಸ್ಥಾನ ಗೆಲ್ಲಲಿದೆ. ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಪ‍ಕ್ಷ 12 ರಿಂದ 18 ಸ್ಥಾನ ಗೆಲ್ಲಲಿದೆ. ಈ ಬಗ್ಗೆ ತಲೆಕೆಡಿಸಿ ಕೊಳ್ಳುವ ಅಗತ್ಯ ಇಲ್ಲ ಎಂದೂ ಚರ್ಚೆ ನಡೆಯಿತು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಕೆ.ಎಚ್.ಮುನಿಯಪ್ಪ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಎಂ.ಪಟ್ಟಣ ಮತ್ತು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT