ಬೆಂಗಳೂರು: ವಿಧಾನ ಸಭೆ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ.

ಮಂಗಳವಾರ (ಮಾರ್ಚ್ 9) ಬೆಳಿಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಿದ್ದು, ಮಂಗಳವಾರದಿಂದ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಆದರೆ, ಬಜೆಟ್ ಮಂಡನೆಯ ಆರಂಭವಾಗುತ್ತಿದ್ದಂತೆ, ‘ಅನೈತಿಕ ಸರ್ಕಾರ ಬಜೆಟ್ ಮಂಡಿಸುತ್ತಿದೆ’ ಎಂದು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದ್ದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕರ ಸಭೆ ರಾತ್ರಿ ನಡೆದಿತ್ತು. ಈ ಸಭೆಯಲ್ಲಿ ಕಲಾಪ ಸಲಹಾ ಸಮಿತಿ ಸಭೆಗೆ ಗೈರಾಗಲು ನಿರ್ಧರಿಸಲಾಗಿದೆ.

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ನಿಲುವಳಿ ಮಂಡಿಸಲು ತೀರ್ಮಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.