ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಬಗ್ಗೆ ಹಗುರ ಮಾತಿನ ಆರೋಪ: ಸೂಲಿಬೆಲೆ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ

ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಮಾಡಿಕೊಂಡಿದೆ
Published 19 ಜನವರಿ 2024, 12:42 IST
Last Updated 19 ಜನವರಿ 2024, 12:42 IST
ಅಕ್ಷರ ಗಾತ್ರ

ಬೆಂಗಳೂರು: ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾಂಗ್ರೆಸ್, ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದೆ.

ಈ ಕುರಿತು X ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಮಾಡಿಕೊಂಡಿದೆ.

‘ಚಕ್ರವರ್ತಿ ಸೂಲಿಬೆಲೆ, ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಸುಳ್ಳುಗಳನ್ನು ಹಬ್ಬಿಸುತ್ತ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು’ ಗೃಹಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡುತ್ತೇವೆ ಎಂದು ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT