ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿವ್ಯಾ ಹಾಗರಗಿ– ಉಮೇಶ್ ಜಾಧವ್‌ ನಂಟಿನ ತನಿಖೆಗೆ ಕಾಂಗ್ರೆಸ್‌ ಆಗ್ರಹ

Published 19 ಏಪ್ರಿಲ್ 2024, 21:06 IST
Last Updated 19 ಏಪ್ರಿಲ್ 2024, 21:06 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ಭರ್ತಿಗೆ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿನ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜತೆ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್‌ ಹೊಂದಿರುವ ನಂಟಿನ ಕುರಿತು ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಕಾಂಗ್ರೆಸ್‌ ಆಗ್ರಹಿಸಿದೆ.

ದಿವ್ಯಾ ಅವರು ಉಮೇಶ್‌ ಜಾಧವ್‌ ಅವರ ಜತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಮೂಲಕ ಆಯೋಗಕ್ಕೆ ದೂರು ಸಲ್ಲಿಸಿರುವ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು, ‘ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗಿರುವ ದಿವ್ಯಾ ಜತೆ ಜಾಧವ್‌ ಗುರುತಿಸಿಕೊಳ್ಳುತ್ತಿರುವುದರಿಂದ ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತಾಗುತ್ತದೆ’ ಎಂದು ದೂರಿದ್ದಾರೆ.

‘ಸಂಸದರಾಗಿರುವ ಜಾಧವ್‌, ತಮ್ಮ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವ ಅಪಾಯವಿದೆ. ಇದು ನ್ಯಾಯದಾನ ಪ್ರಕ್ರಿಯೆಯಲ್ಲಿ ನ್ಯಾಯಾಂಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಸಾಧ್ಯತೆ ಇದೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT